ಯುವವಾಹಿನಿ( ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ
ಯುವ ವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ : ಮಹೇಶ್ ಕುಮಾರ್
ಮಂಗಳೂರು : ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಮಾಜಮುಖಿ ಕಾರ್ಯಕ್ಕೆ ಸಮಾಜದ ಸರ್ವರ ಬೆಂಬಲ ಅತ್ಯಂತ ಸಂತಸ ತಂದಿದೆ, ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆದ ನಾಟಕ ಪ್ರದರ್ಶನದಲ್ಲಿ ಪುರಭವನದ ಜನಸ್ತೋಮದಿಂದ ತುಂಬಿರುವುದು ಮಹಿಳಾ ಘಟಕದ ಶ್ರಮಕ್ಕೆ ಸಂದ ಪ್ರತಿಫಲ ಎಂದು ಅಸಿಸ್ಟೆಂಟ್ ಕಮಿಷನರ್ ಅಫ್ ಪೋಲಿಸ್ ಮಹೇಶ್ ಕುಮಾರ್ ತಿಳಿಸಿದರು.
ಅವರು ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಘಟಕದ ಆರ್ಥಿಕ ಬಲವರ್ಧನೆಗಾಗಿ ದಿನಾಂಕ 30-01-2024 ರಂದು ಮಂಗಳೂರಿನ ಪುರಭವನದಲ್ಲಿ “ಕಥೆ ಎಡ್ಡೆಂಡು”* ನಾಟಕ ಪ್ರದರ್ಶನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ವಿಶ್ವಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ
ಊರ್ಮಿಳಾ ರಮೇಶ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಮಹಿಳಾ ವಿಭಾಗದ ಅಧ್ಯಕ್ಷರಾದ ಸುಮಲತಾ ಸುವರ್ಣ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಶಿಧರ ಹೆಗ್ಡೆ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು,
ನಾಟಕ ಪ್ರದರ್ಶನಕ್ಕೆ ಆರ್ಥಿಕ ಬಲ ತುಂಬಿದ ದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆಸಿದ ಕಥೆ ಎಡ್ಡೆಂಡು ನಾಟಕವು,ತುಂಬಿ ತುಳುಕಿದ ಪುರಭವನ ಹಾಗು ಪ್ರೇಕ್ಷಕರ ಮೆಚ್ಚುಗೆಯ ಮಾತುಗಳಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಶುಭ ರಾಜೇಂದ್ರ ಸ್ವಾಗತಿಸಿದರು, ಕಾರ್ಯದರ್ಶಿ ದಿವ್ಯ ವಂದಿಸಿದರು, ಮಾಜಿ ಅಧ್ಯಕ್ಷೆ ವಿದ್ಯಾ ರಾಕೇಶ್ ನಿರೂಪಿಸಿದರು.
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶುಭಾ ರಾಜೇಂದ್ರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.