3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ ನ್ಯೂಸ್ ವತಿಯಿಂದ ಗೌರವಿಸಲಾಯಿತು.
ಬೆಂಗಳೂರಿನ ಪ್ರತಿಷ್ಠಿತ ದಿ ರಿಟ್ಜ್ ಕಾರ್ಲ್ಟ್ರನ್ ಹೋಟೆಲ್‌ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿ ವಹಿಸಿದ್ದರು. ರಾಜ್ಯದ ವಿವಿಧ ಸಾಧಕರಿಗೆ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
ಅಸಿಸ್ಟೆಂಟ್ ಕಮೀಶನರ್ ಆಫ್ ಪೋಲಿಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರೀನಾ ಸುವರ್ಣಾ. ಎನ್ ಅವರನ್ನು ಸಹ ಈ ಸಂದರ್ಭದಲ್ಲಿ ಗೌರವಿಸಲಾಯಿತು.
ರೀನಾ ಸುವರ್ಣಾ. ಎನ್ ಅವರು 2014 ರಂದು ಪೊಲೀಸ್ ಇಲಾಖೆಗೆ ಸೇರಿ ಪ್ರೊಬೇಷನರಿ ಅವಧಿಯ ಕಾರ್ಯದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಗಮನ ಸೆಳೆದರು, ಅಪರಾಧ ಪ್ರಕರಣಗಳ ಮಿಂಚಿನ ಕಾರ್ಯದಲ್ಲಿ ನಿರತವಾಗಿ ಹಾಗೂ ಸಾಮಾಜಿಕ ಕಾರ್ಯಗಳನ್ನು ಮಾಡಿ ಜನಮನ ಗೆದ್ದ ದಕ್ಷ ಅಧಿಕಾರಿ ಎಂದು ಜೀ ಕನ್ನಡ ನ್ಯೂಸ್ ವತಿಯಿಂದ, Zee Achievers Awards ಭಾಜನರಾದರು.