TOP STORIES:

FOLLOW US

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು


ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು

ಉಡುಪಿ : ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಾರಕೂರಿನ ಆರ್ ಟಿ ಐ ಕಾರ್ಯಕರ್ತ ಶಂಕರ ಶಾಂತಿಯವರು‌‌ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಮತ್ತು ಪದಾಧಿಕಾರಿಗಳಿಂದ ಫೆಬ್ರವರಿ 25ರಂದು ಮನವಿ ಸಲ್ಲಿಸಲಾಗಿದ್ದರೂ ದುಷ್ಕರ್ಮಿಗಳನ್ನು ಇನ್ನೂ ಬಂಧಿಸದಿರುವುದರಿಂದ ಇಂದು ಉಡುಪಿ ಬನ್ನಂಜೆ ಬಿಲ್ಲವ ಸಂಘದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಮಾನ ಮನಸ್ಕರು ಜೊತೆಯಾಗಿ ಸಭೆ ಸೇರಿದರು.

ಈ ಸಂದರ್ಭ ಮಾತನಾಡಿದ ಉಡುಪಿ ಜಿಲ್ಲಾ ನಗರ ಸಭೆಯ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸಂಘಟಿತ ಹೋರಾಟದ ಮೂಲಕ ನಾವು ಮುಂದಿನ ಹೆಜ್ಜೆ ಇಡಬೇಕಾಗಿದೆ. ಹತಾಶೆ ಭಾವನೆಯನ್ನು ಬಿಟ್ಟು ಧನಾತ್ಮಕತೆಯಲ್ಲಿ ನಾವು ಮುನ್ನಡೆಯುವ ಎಂದರು.

ರಾಮ ಮಾಸ್ಟರ್ ಶಂಕರ್ ಶಾಂತಿಯವರಿಗೆ ಧೈರ್ಯ ತುಂಬುವ ಕಾರ್ಯದೊಂದಿಗೆ ದುಷ್ಕರ್ಮಿಗಳನ್ನು ಪೋಲಿಸ್ ಇಲಾಖೆ ಬಂಧಿಸಿ ಸರಿಯಾದ ಶಿಕ್ಷೆ ಸಿಗುವವರೆಗೆ ಹೋರಾಡಬೇಕಿದೆ ಎಂದರು.

ಸಮಾನ ಮನಸ್ಕರಾದ ಕಿರಣ್ ಮಾತನಾಡಿ ಶಂಕರ್‌ ಪೂಜಾರಿ ನಿಸ್ವಾರ್ಥ ಸಮಾಜ ಸೇವಕರಾಗಿ ಸಮಾಜದಲ್ಲಿಯ ಭೃಷ್ಟರ ಭೃಷ್ಟಾಚಾರವನ್ನು ಬಯಲಿಗೆಳೆಯುವ ಕಾರ್ಯ ಮಾಡುತ್ತಿದ್ದು ಅದರಿಂದ ಸಾರ್ವಜನಿಕರಿಗೆ ಉಪಯೋಗವಾಗಿದೆ. ಆದರೆ ಭೃಷ್ಟರಿಗೆ ಕಂಟಕವಾಗಿದೆ. ಹಲ್ಲೆ ಪೂರ್ವನಿಯೋಜಿತವಾಗಿದ್ದು, ಶಂಕರ ಶಾಂತಿಯವರಿಗೆ ನ್ಯಾಯ ಸಿಗುವವರೆಗೆ ಹೋರಾಡುವ ಎಂದರು.

ಬಿಲ್ಲವ ಚಿಂತಕ‌ ದಯಾನಂದ ಉಗ್ಗೆಲ್ ಬೆಟ್ಟು ಮಾತನಾಡಿ ಸಮಾಜದಲ್ಲಿಯ ಅನ್ಯಾಯಕ್ಕೆ ತುಡಿಯುವ ಮನಸ್ಥಿತಿಯ ಶಂಕರ್ ಶಾಂತಿಯವರ ಹೋರಾಟ ಮುಂದೆಯೂ ಸಾಗಲು ನಾವೆಲ್ಲ ಅವರಿಗೆ ಧೈರ್ಯ ತುಂಬಬೇಕಾಗಿದೆ. ಕೆಲವು ಕ್ಷುಲ್ಲಕ ಮನಸಿನ ವ್ಯಕ್ತಿಗಳು ಈ ಹೋರಾಟದ‌ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದು

ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ವಹಿಸಿ ಮಾತನಾಡಿ ಘಟನೆ ನಡೆದು 6 ದಿವಸವಾದರೂ ಇನ್ನೂ ದುಷ್ಕರ್ಮಿಗಳನ್ನು ಬಂಧಿಸದಿರುವುದು ಪೋಲಿಸ್ ಇಲಾಖೆಯ ಮೇಲೆ ನಮಗೆ ಅನುಮಾನ ಮೂಡಿಸುತ್ತಿದೆ. ಒಂದು ವೇಳೆ ಬಂಧಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಉಪಸ್ಥಿತರಿದ್ದ ಸಮಾಜ ಬಾಂಧವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಪದಾಧಿಕಾರಿಗಳು, ಬಿಲ್ಲವ ಸಮಾಜದ ಸಮಾನ ಮನಸ್ಕರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಗೆಜ್ಜೆಗಿರಿ ನೂತನ ಪಧಾಧಿಕಾರಿಗಳ ಪದಗ್ರಹಣ


Share       ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ ಇವರ ನೇತೃತ್ವದ ಪಧಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗಿತು. ನೂತನ ಪಧಾಧಿಕಾರಿಗಳನ್ನು


Read More »

ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!


Share       బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು


Read More »

ನಗರ ಪಾಲಿಕೆ ಪ್ರತಿಪಕ್ಷದ ನಾಯಕರಾಗಿ ಅನಿಲ್ ಕುಮಾರ್ ಆಯ್ಕೆ


Share       ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷದ ನಾಯಕರಾಗಿ ನೂತನವಾಗಿ ಆಯ್ಕೆಯಾದ ಜನಪರ ನಿಲುವಿನ ರಾಜಕೀಯ ನಾಯಕ, ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನೆಯ ಪ್ರತಿಪಾದಕ, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ


Read More »

ವಿಟ್ಲ :ಯುವವಾಹಿನಿ (ರಿ.)ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮರುವಾಳ


Share       ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ 2024 /25 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು. ಅಧ್ಯಕ್ಷರಾಗಿ ಹರೀಶ್ ಪೂಜಾರಿ


Read More »

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ


Share       ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ


Read More »

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆ


Share       ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.   ನಾಡಿನ


Read More »