ಗೋವಾ ರಾಜ್ಯದಲ್ಲಿ ಆರ್ಯ ಈಡಿಗ ಮಹಾ ಮಂಡಳಿಯ ಆಯ್ದ ಪ್ರತಿನಿಧಿಗಳ ಸಭೆಯನ್ನು ಗೋವಾ ಮುಖ್ಯಮಂತ್ರಿಗಳಾದ ಶ್ರೀ ಪ್ರಮೋದ್ ಸಾವಂತ್ ಮತ್ತು ಕೇಂದ್ರ ಸಚಿವರಾದ ಶ್ರೀ ಶ್ರೀಪಾದ್ ನಾಯಕ್ ಅವರಿಂದ ಉದ್ಘಾಟನೆ ಮತ್ತು ದಿವಂಗತ ಶ್ರೀ ಪುನೀತ್ ರಾಜಕುಮಾರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.
ಗೋವಾ ರಾಜ್ಯದಲ್ಲಿ ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿಯ ಅಧ್ಯಕ್ಷರಾದ ಶ್ರೀ ಪ್ರಣವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ರಾಷ್ಟ್ರೀಯ ಪ್ರತಿನಿಧಿ ಸಭೆಯನ್ನು ನಡೆಸಲಾಯಿತು, ಮತ್ತು ಕರ್ನಾಟಕ ರಾಜ್ಯದ ಖ್ಯಾತ ಚಲನಚಿತ್ರ ನಟ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಗೋವಾ ರಾಜ್ಯದ ಗೌರವನ್ವಿತ ಮುಖ್ಯಮಂತ್ರಿಗಳಾದ ಡಾಕ್ಟರ್ ಶ್ರೀ ಪ್ರಮೋದ್ ಸಾವಂತ್ ರವರು ಉದ್ಘಾಟಿಸಿದರು, ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವರು ( ಬಂದರು ಮತ್ತು ಪ್ರವಾಸೋದ್ಯಮ ಇಲಾಖೆ) ಶ್ರೀ ಶ್ರೀಪಾದ್ ನಾಯ್ಕ್ ರವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು, ಕರ್ನಾಟಕ ರಾಜ್ಯದಿಂದ ಸಮಾಜದ ಹಿರಿಯ ಮುಖಂಡರು ಮತ್ತು ಮಾಜಿ ಸಚಿವರು ಶ್ರೀ ಮಾಲಿಕಯ್ಯ ಗುತ್ತೇದಾರ್ ರವರು , ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಚ್.ಆರ್ ಶ್ರೀನಾಥ್ ದಣಿಗಳು, ಮತ್ತು 14 ರಾಜ್ಯಗಳಿಂದ ಆಯಾ ರಾಜ್ಯದ ಆಯ್ದ ಪ್ರತಿನಿಧಿಗಳು, ರಾಜ್ಯ ಮತ್ತು ರಾಷ್ಟ್ರದ ಮಟ್ಟದ ಆರ್ಯ ಈಡಿಗ ರಾಷ್ಟ್ರೀಯ ಮಹಾ ಮಂಡಳಿಯ ಪದಾಧಿಕಾರಿಗಳು ಭಾಗವಹಿಸಿದರು.
ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ನಡೆದ ಈ ಕಾರ್ಯಕ್ರಮದಲ್ಲಿ ಕೆಲ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.