TOP STORIES:

ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.


ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ.

ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ ಯುವಕ ಯುವತಿಯರು ಪ್ರತಿಭಾ ಕುಳಾಯಿ ಅವರನ್ನು ಭೇಟಿಮಾಡಿದ್ದಾರೆ. ಭೇಟಿ ಮಾಡಿದವರಿಗೆ ಉದ್ಯೋಗದ ವ್ಯವಸ್ಥೆ ಮಾಡಿರುವುದಾಗಿ ಪ್ರತಿಭಾ ಕುಳಾಯಿ ಫೇಸ್ ಬುಕ್ ಪೋಸ್ಟ್ ನಲ್ಲಿಹೇಳಿದ್ದಾರೆ.

ಪ್ರತಿಭಾ ಫೋಸ್ಟ್ ನಲ್ಲಿ ಏನೇನಿದೆ..? ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನುಭೇಟಿಯಾಗಿ ಅವರಿಗೆ ಅವರ ವಿದ್ಯಾರ್ಹತೆಗೆ ಅನುಸಾರವಾಗಿ ಉದ್ಯೋಗ ದೊರಕಿಸಿಕೊಡುವ ಭರವಸೆ ನೀಡಿದ್ದು ಅದರಂತೆ ಇಂದುಬೆಳಗ್ಗಿನಿಂದ ನನ್ನ ಕಚೇರಿಯಲ್ಲಿ ಕಾರ್ಯ ನಿರತಳಾಗಿದ್ದೇನೆ. ಟೋಲ್ ಇನ್ ಚಾರ್ಜ್ ಮಿಥುನ್ ಬೈಕಂಪಾಡಿ ಸೂಕ್ತ ರೀತಿಯಲ್ಲಿಸ್ಪಂದಿಸಿದ್ದು ಈಗಾಗಲೇ 22 ಮಂದಿ ನನ್ನನ್ನು ಭೇಟಿಯಾಗಿ ಬಹುಪಾಲು ಯುವಕಯುವತಿಯರಿಗೆ ಬೇರೆ ಬೇರೆ ಸಂಸ್ಥೆಗಳಲ್ಲಿ ಸೂಕ್ತಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇನೆ.

ಉದ್ಯೋಗ ಕಳೆದುಕೊಂಡವರಲ್ಲಿ ಒಬ್ಬ ವಿದ್ಯಾರ್ಥಿಯಾಗಿದ್ದು ಆತನ ಮನೆಯ ಪರಿಸ್ಥಿತಿ ತೀರಾ ಹದಗೆಟ್ಟಿರುವ ಕಾರಣ ಹಗಲುಕೆಪಿಟಿಯಲ್ಲಿ ಕಲಿತು ರಾತ್ರಿ ಟೋಲ್ ನಲ್ಲಿ ಕೆಲಸ ಮಾಡುತ್ತಿದ್ದ.ಆತನನ್ನು ನನ್ನ ಕುಳಾಯಿ ಫೌಂಡೇಶನ್ ಮೂಲಕ ದತ್ತು ಪಡೆದುಶಿಕ್ಷಣದ ಖರ್ಚು ವೆಚ್ಚ ನೋಡಿಕೊಳ್ಳುವ ಜೊತೆಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದೇನೆ. ಇನ್ನೊಬ್ಬ ಮಹಿಳೆ ಟೋಲ್ ನಲ್ಲಿ ದುಡಿದು ತನ್ನಮಕ್ಕಳನ್ನು ಸಾಕುತ್ತಿದ್ದು ಆಕೆಗೆ ಸೂಕ್ತ ಉದ್ಯೋಗ ಕೊಡಿಸಿ ಮಕ್ಕಳನ್ನು ಶೈಕ್ಷಣಿಕ ದತ್ತು ಪಡೆಯಲಿದ್ದೇನೆ ಎಂದು ಹೇಳಿದ್ದಾರೆ.

ಕುಳಾಯಿ ಫೌಂಡೇಶನ್ ಮೂಲಕ ಈಗಾಗಲೇ 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಪಡೆಯಲಾಗಿದ್ದು ವರ್ಷಇನ್ನಷ್ಟು ಮಕ್ಕಳನ್ನು ಶಿಕ್ಷಣದ ಉದ್ದೇಶದಿಂದ ದತ್ತು ಪಡೆಯಲಿದ್ದೇನೆ. ನಾನು ಭರವಸೆಗಳನ್ನು ಮಾತ್ರ ಕೊಡುವುದಿಲ್ಲ, ನುಡಿದಮಾತಿನಂತೆ ನಡೆಯುತ್ತೇನೆ. ಕುರಿತು ಇನ್ನಷ್ಟು ಮಾಹಿತಿ ಮುಂದಿನ ದಿನಗಳಲ್ಲಿ ನಿಮ್ಮೆದುರು ನೀಡಲಿದ್ದೇನೆ ಎಂದು ಬರೆದಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡರೆ ಅವರಿಗೆ ಅವರ ವಿದ್ಯಾರ್ಹತೆಗೆ ಅನುಸಾರವಾಗಿ ಉದ್ಯೋಗದೊರಕಿಸಿಕೊಡುವ ಭರವಸೆಯನ್ನು ಮೊದಲು ಪ್ರತಿಭಾ ಕುಳಾಯಿ ನೀಡಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »