TOP STORIES:

ಎಪ್ರಿಲ್ 22 ರಂದು ದುಬೈನಲ್ಲಿ ನಡೆಯಲಿದೆ ‘ದುಬೈ ಬಿಲ್ಲವೋತ್ಸವ’


ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ರೇಣುಕ ಮಠದ ಸೋಲೂರು ಶ್ರೀ ವಿಖ್ಯಾತನಂದಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಆಗಮಿಸಿ ಆರ್ಶಿವಚನ ಮಾಡಲಿದ್ದಾರೆ ಹಾಗೂ ಎಪ್ರಿಲ್ 22 ರಂದು ಬೆಳಿಗ್ಗೆಯಿಂದಸಾಯಂಕಾಲದ ವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ ಎಂದು ತಿಳಿಸಿದರು.ಎಪ್ರಿಲ್ 22 ರಂದು ನಗರದ ಶೇಖ್ ಝಯೆದ್ ರಸ್ತೆಯ ಕ್ರೌನ್ ಪ್ಲಾಜಾ ದಲ್ಲಿ ನಡೆಯುವ ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇವರ್ಷದದುಬೈ ಬಿಲ್ಲವೋತ್ಸವ ಸಲುವಾಗಿ ಎಪ್ರಿಲ್ 7 ರಂದು ನಗರದ ಊದ್ ಮೇತದ ಬಿರಿಯಾನಿ 2020 ರೆಸ್ಟೋರೆಂಟ್ ನಲ್ಲಿನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈಯ ಕಾರ್ಯದರ್ಶಿ ದೀಪಕ್ ಎಸ್.ಪಿ. ಮಾತನಾಡುತ್ತಾ ಬೆಳಿಗ್ಗೆಯಿಂದಸಂಜೆಯವರೆಗೆ ನಡೆದ ಬಿಲ್ಲವಾಸ್ ಫ್ಯಾಮಿಲಿ ದುಬೈಯ ಸ್ನೇಹ ಸಮ್ಮಿಲನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ವಿದ್ವಾನ್ಸುರೇಶ್ ಅತ್ತಾವರ್ ಇವರ ನಿರ್ದೇಶನದಲ್ಲಿಬಿರುವ ಬೊಲ್ಲಿಲುಎಂಬ ತುಳು ನೃತ್ಯ ರೂಪಕ, ಬಿರುವೆರ್ ಕುಡ್ಲ ದುಬೈತಂಡದವರಿಂದಬಿರ್ದುದ ಪಿಲಿಕುಲು”(ಪಿಲಿನಲಿಕೆ) ಮತ್ತು ತೆಲಿಕೆದ ತೆನಾಲಿ ಸುನೀಲ್ ನೆಲ್ಲಿಗುಡ್ಡೆಯವರ ನೇತೃತ್ವದಲ್ಲಿ ಊರಿನಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದಗಮ್ಜಲ್ ಕಾಮಿಡಿಎಂಬ ಹಾಸ್ಯ ಕಾರ್ಯಕ್ರಮ ಜರಗಲಿದೆ.ಕುಡ್ಲ ಕುಸಲ್ ರವಿರಾಮರಾಮಕುಂಜ,ಕಾಮಿಡಿ ಕಿಲಾಡಿಗಳು ಖ್ಯಾತಿಯ ಪಿಂಕಿ ರಾಣಿ,ಕುಸಾಲ್ದ ಗುರಿಕಾರೆ ಸುಜಿತ್ ಕೋಟ್ಯಾನ್, ಹರೀಶ್ ಬಂಗೆರ,ಸಂಗೀತನಿರ್ದೇಶಕ ಶುಭಕರ ಬೆಳಪುರವರು ಊರಿಂದ ಆಗಮಿಸಲಿದ್ದು ಎಲ್ಲರನ್ನೂ ಮನರಂಜಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈಯ ನಿಕಟ ಪೂರ್ವ ಅಧ್ಯಕ್ಷರಾದ ಸತೀಶ್ ಪೂಜಾರಿ,ನಿಕಟ ಪೂರ್ವಉಪಾಧ್ಯಕ್ಷರಾದ ಆನಂದ ಬೈಲೂರು,ಈಗಿನ ಉಪಾಧ್ಯಕ್ಷರಾದ ಸತೀಶ್ ಉಳ್ಳಲ್,ಪ್ರಕಾಶ್ ಪೂಜಾರಿ,ಸಾಂಸ್ಕೃತಿಕ ಕಾರ್ಯದರ್ಶಿ ರವಿಕೋಟ್ಯಾನ್,ಕೋಶಾಧಿಕಾರಿ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.

ವರದಿವಿಜಯಕುಮಾರ್ ಶೆಟ್ಟಿ ಗಾಣದಮೂಲೆ ಮಜಿಬೈಲ್ (ದುಬೈ)


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »