TOP STORIES:

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್


ರಾತ್ರಿ ಬೆಂಗಳೂರಿನಲ್ಲಿ ಕಾರು ಅಪಘಾತ, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್-ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್

ಇತ್ತೀಚಿಗೆ ಖ್ಯಾತ ಮಹರ್ಷಿ ಆನಂದ ಗುರೂಜಿಯವರು ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಒಂದು ಮಾತು ಹೇಳಿದ್ದರು. “ಬೆಳಿಗ್ಗೆ ಎದ್ದು ಸಚಿವರ ಮನೆಯ ಮುಂದೆ ಹೋದರೆ ಅಲ್ಲಿರುವ ಜನರ ಜಂಗುಳಿಯೇ ಅವರ ಕಾರ್ಯವೈಖರಿಯನ್ನು ಸಾರುತ್ತದೆ.

ಇಂತಹ ಸಚಿವರು ಟಾರ್ಚ್ ಹಾಕಿ ಹುಡುಕಿದರೂ ಸಿಗಲ್ಲ” ಎಂದು. ಈ ಬಾರಿ ಒಂದು ಅಹಿತಕರ ಘಟನೆಯೊಂದಿಗೆ ಅದು ಮತ್ತೆ ಸಾಬೀತಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಅವಿರತ ಸರ್ಕಾರಿ ಸಭೆಗಳನ್ನು ಮುಗಿಸಿ ಊರಿನತ್ತ ಪ್ರಯಾಣ ಬೆಳೆಸುತ್ತಿರುವ ಸಂದರ್ಭದಲ್ಲಿ ತಮ್ಮ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತ ಎಂದಮೇಲೆ ಅಲ್ಲಿ ನಂತರ ನಡೆಯುವ ಬೆಳವಣಿಗಳು ಗೊತ್ತೇ ಇದೆ. ‌ಪ್ರಕರಣ, ಸಮಾಧಾನ ಅದು ಇದು ಎಂದು ಕೆಲವೊಂದು ಫಾರ್ಮಲಿಟೀಸ್ ಇದೆ. ಎಲ್ಲಾ ಮುಗಿಸಿ ಬೇರೆ ಕಾರು ತರಿಸಿ ಕೋಟಾ ದ ತಮ್ಮ ಮನೆಗೆ ತಲುಪುವಾಗ ಮುಂಜಾನೆ 4 ಗಂಟೆ.

ಇಂದಿನ ದಿನಚರಿಯಲ್ಲಿ ಮನೆಯಲ್ಲಿ ಸಾರ್ವಜನಿಕ ಭೇಟಿ ಎಂದಿತ್ತು. ಬಹುಶಃ ಎಲ್ಲರೂ ಇದು ಅಸಾಧ್ಯ ಎಂದೆನಿಸಿರಬಹುದು.ಆದರೆ ಅವರು ಅದನ್ನೂ ಸಾಧಿಸಿ ತೋರಿಸಿದ್ದಾರೆ. ತಮ್ಮ ವೇಳಾಪಟ್ಟಿಯಂತೆ ಬೆಳಿಗ್ಗೆ 7 ಗಂಟೆಗೆ ಸಾರ್ವಜನಿಕರ ಭೇಟಿಗೆ ಹಾಜರಾಗಿದ್ದಾರೆ. 10 ಗಂಟೆಗೆ ಮಲಗಿ 7 ಗಂಟೆಗೆ ಏಳಲೂ ಕಷ್ಟವಾಗುವ ಈಗಿನ ಕಾಲದಲ್ಲಿ ಪ್ರತಿದಿನ ತಡರಾತ್ರಿ ಮಲಗಿ ಬೆಳಗೆದ್ದು ಸಾರ್ವಜನಿಕರ ಸಮಸ್ಯೆ ಆಲಿಸುವ ಸಚಿವರು ವಿಶೇಷವಾಗಿಯೇ ಕಾಣುತ್ತಾರೆ. ರಾಜ್ಯದಲ್ಲಿ ಅದೆಷ್ಟೇ ಸಜ್ಜನ ಸಚಿವರು ಇರಬಹುದು.

ಆದರೆ ಕೋಟ ಶ್ರೀನಿವಾಸ ಪೂಜಾರಿ ಎಲ್ಲರಿಗಿಂತಲೂ ಭಿನ್ನ ಅವರಿಗೆ ಅವರೇ ಸಾಟಿ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »