TOP STORIES:

ಕೋಡಿಕಲ್ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಮಂದಿರ ಜ್ಞಾನ ಮಂದಿರವಾಗಲಿ


 

‘ಸಂಘಟನೆಯಿಂದ ಬಲಯುತರಾಗಿ’ ಎಂಬ ಗುರುಗಳ ಸಂದೇಶದಂತೆ ಕೋಡಿಕಲ್ ಗುರುನಗರ ಪರಿಸರದಲ್ಲಿ ನಾರಾಯಣಗುರುಗಳ ತತ್ವದಲ್ಲಿ ಸಾಮಾಜಿಕ ಸೇವೆ ಮಾಡುತ್ತಿರುವ ಹಳೆಬೇರು ಹೊಸಚಿಗುರುಗಳು ಸಂಘಟನಾತ್ಮಕವಾಗಿ ಸೇರಿಕೊಂಡು ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಮಂದಿರವನ್ನು ಬಹಳ ಸುಂದರ ಮತ್ತು ಅಚ್ಚುಕಟ್ಟಾಗಿ ನಿರ್ಮಾಣ ಮಾಡಿದ್ದಾರೆ.‌

ಕೇವಲ 10 ಸೆಂಟ್ಸ್ ಜಮೀನಿನಲ್ಲಿ ಸುಸಜ್ಜಿತ ಮಂದಿರ ಮತ್ತು‌ಸಭಾಂಗಣ ನಿರ್ಮಾಣ ಮಾಡಬಹುದು ಎಂಬುದನ್ನು ಕೋಡಿಕಲ್ ಪರಿಸರದ ಎಸ್‌ಎನ್‌ಡಿಪಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೋರಿಸಿಕೊಟ್ಟಿದ್ದಾರೆ. ಇಂತಹ ಕಾರ್ಯ ಪ್ರಶಂಸನೀಯ. ಈ ಮಂದಿರ ಜಾತಿ ಮತ ಭೇದ ಮರೆತು ನಾವೆಲ್ಲರೂ ಒಂದೇ ಎನ್ನುವ ತತ್ವ ಪಸರಿಸುತ್ತ ಮುಂದಿನ ದಿನಗಳಲ್ಲಿ ಜ್ಞಾನ ಮಂದಿರವಾಗಿ ಬೆಳಗಲಿ ಎನ್ನುವ ಸದಾಶಯ ನನ್ನದು.

ಶಿವಗಿರಿಯ ಮನೋಜ್ ತಂತ್ರಿ ನೇತೃತ್ವದಲ್ಲಿ ಮಹೇಶ್ ಶಾಂತಿ ಮತ್ತು ನವೀನ್ ಶಾಂತಿ ವೈದಿಕತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಬಿಂಬ ಪ್ರತಿಷ್ಠಾಪನೆ ನೆರವೇರಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನನ್ನ ಪಾಲಿನ ಸುಯೋಗವೇ ಸರಿ. ಮಂದಿರ ಅಧ್ಯಕ್ಷ ಪುರುಷೋತ್ತಮ ಪೂಜಾರಿ, ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಕಿಶೋರ್ ಕುಮಾರ್‌, ಶಾಸಕರಾದ ಭರತ್ ಶೆಟ್ಟಿ, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಸಾಯಿರಾಂ, ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಎಸಿಪಿ ಮಹೇಶ್ ಕುಮಾರ್, ಕಾರ್ಪೋರೆಟರ್‌ಗಳಾದ ಕಿರಣ್‌ಕುಮಾರ್, ಅನೀಲ್ ಕುಮಾರ್‌, ವೇದಾವತಿ, ಮನೋಜ್‌ಕುಮಾರ್‌, ಪ್ರಮುಖರಾದ ಸುಮಲತಾಸುವರ್ಣ, ರೋಹಿಣಿ, ಪದ್ಮನಾಭ ಕೋಟ್ಯಾನ್, ಲೀಲಾಕ್ಷ ಕರ್ಕೇರ, ದಯಾಮಣಿ ವಿ. ಕೋಟ್ಯಾನ್, ಜಯಂತಿ ದುಗ್ಗಪ್ಪ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »