TOP STORIES:

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್? ಹಾಗಾದ್ರೆ ಓದಿ ಈ ಸುದ್ದಿ..!


ಆರೋಗ್ಯಕರ ದೇಹವನ್ನು ಪಡೆಯಬೇಕು ಅಂದರೆ ಬೆಳಗ್ಗಿನ ಉಪಹಾರದ ಕಡೆಯೂ ಸೂಕ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಆದರೆ ಅನೇಕರಿಗೆ ಕೆಲಸಕ್ಕೆ ಹೋಗುವ ತರಾತುರಿ, ಮಕ್ಕಳನ್ನು ಶಾಲೆಗೆ ಕಳುಹಿಸುವ ಒತ್ತಡದಿಂದಾಗಿ ಉಪಹಾರ ಸೇವಿಸಲು ಸಾಧ್ಯವೇ ಆಗೋದಿಲ್ಲ. ಇಂತಹ ಸಂದರ್ಭದಲ್ಲಿ ಅನೇಕರು ಬಾಳೆ ಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುವುದುಂಟು.

ಈ ರೀತಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್​ ಎಂದು ಎಂದಾದರೂ ಯೋಚಿಸಿದ್ದೀರೇ..? ಇಲ್ಲ ಎಂದಾದಲ್ಲಿ ಈ ಸ್ಟೋರಿಯನ್ನು ನೀವು ಓದಲೇಬೇಕು.

ರಾತ್ರಿ ಗಂಟೆಗಟ್ಟಲೇ ನಿದ್ದೆ ಮಾಡಿ ಬೆಳಗ್ಗೆ ಏಳುವ ನೀವು ಏನನ್ನು ಸೇವಿಸುತ್ತೀರಾ ಅನ್ನೋದು ನಿಮ್ಮ ಆರೋಗ್ಯವನ್ನು ರಕ್ಷಿಸಲೂಬಹುದು. ಹಾಳುಗೆಡವಲೂಬಹುದು. ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಅನೇಕರು ಬೆಳಗ್ಗೆ ಬಾಳೆಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಕೂಡ ಹೌದು.

ಬಾಳೆಹಣ್ಣನ್ನು ತಿನ್ನಬೇಕು ಎನಿಸಿದ್ರೆ ಸಾಕು ಅದನ್ನು ಹುಡುಕೋದು ಕಷ್ಟದ ಕೆಲಸವೇ ಅಲ್ಲ. ಒಂದು ವೇಳೆ ನೀವು ಫಿಟ್​ನೆಸ್​ ಪ್ರಿಯರಾಗಿದ್ದು ಬೆಳಗ್ಗಿನ ಉಪಹಾರ ತಯಾರಿಸುವ ವಿಚಾರದಲ್ಲಿ ಸೋಂಬೇರಿಗಳಾಗಿದ್ದರೆ ಬಾಳೆಹಣ್ಣು ನಿಮಗೆ ಉತ್ತಮ ಆಯ್ಕೆಯಾಗಿದೆ. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​, ಪೊಟ್ಯಾಷಿಯಂ, ಮ್ಯಾಗ್ನಿಷೀಯಂ ಅಂಶವಿದೆ. ಇದರಿಂದ ನಿಮ್ಮ ಜೀವ ನಿರೋಧ ಶಕ್ತಿ ಉತ್ತಮ ಆಗೋದ್ರ ಜೊತೆ ಜೊತೆಗೆ ಮೂಳೆಗಳೂ ಬಲಿಷ್ಠವಾಗುತ್ತದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ, ವಿಟಮಿನ್​ ಬಿ, ವಿಟಮಿನ್​ ಬಿ 6 ಇದೆ. ಬಾಳೆಹಣ್ಣಿನಲ್ಲಿರುವ ಸಿಹಿ ರುಚಿಯು ನಿಮಗೆ ಹೆಚ್ಚಿನ ಎನರ್ಜಿಯನ್ನು ನೀಡುತ್ತೆ. ಆದರೆ ಯಾವುದೇ ಕಾರಣಕ್ಕೂ ಬಾಳೆ ಹಣ್ಣೊಂದನ್ನೇ ನೀವು ಉಪಹಾರದಲ್ಲಿ ಸೇವನೆ ಮಾಡುವಂತಿಲ್ಲ..!

ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಪೋಷಕಾಂಶ ಅಡಗಿದೆ ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ. ಆದರೆ ಇದರಲ್ಲಿರುವ ಸಕ್ಕರೆ ಅಂಶ ಮಧುಮೇಹಿಗಳಿಗೆ ಒಳ್ಳೆಯದಲ್ಲ. ಅಲ್ಲದೇ ಬಾಳೆಹಣ್ಣಿನಿಂದ ದೇಹಕ್ಕೆ ಸಿಕ್ಕ ಶಕ್ತಿಯು ಕೆಲವೇ ಸಮಯಗಳಲ್ಲಿ ಕರಗಿಬಿಡುತ್ತದೆ. ಇದೇ ಕಾರಣಕ್ಕೆ ನೀವು ಬಾಳೆ ಹಣ್ಣನ್ನು ಓಟ್ಸ್​​, ಇತರೆ ಹಣ್ಣುಗಳೊಂದಿಗೆ ಸೇವಿಸುವುದು ಹೆಚ್ಚು ಸೂಕ್ತ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಮ್ಯಾಗ್ನೆಷಿಯಂ ಅತಿಯಾದ ಪ್ರಮಾಣದಲ್ಲಿದೆ. ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದ್ರೆ ಅದು ದೇಹದ ಜೀರ್ಣ ಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ.


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »