TOP STORIES:

‘ನಮ್ಮ ದಸರಾ- ನಮ್ಮ ಸುರಕ್ಷೆ’ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್‌ 7 ರಿಂದ 16 ರವರೆಗೆ.


ಮಂಗಳೂರು: ‘ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ವರ್ಷದ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್‌ 7 ರಿಂದ 16 ರವರೆಗೆ ನಡೆಯಲಿದೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆಯಲಿವೆ

 

 

 

ಕುದ್ರೋಳಿ ಕ್ಷೇತ್ರದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಚ್. ಎಸ್. ಸಾಯಿರಾಂ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸರಕಾರದ ಮಾರ್ಗಸೂಚಿ ಪ್ರಕಾರವೇ ದಸರಾ ನಡೆಸುವಂತೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದ್ದು, ಅದರಂತೆಯೇ ಈ ಬಾರಿಯ ಎಲ್ಲ ಉತ್ಸವಗಳು ನಡೆಯಲಿದೆ. ಶಾರದಾ ಮೂರ್ತಿಯ ವಿಸರ್ಜನೆಯಂದು ದಸರಾ ಮೆರವಣಿಗೆ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮಗಳು ಯಥಾವತ್ತಾಗಿ ನೆರವೇರಲಿವೆ. ಪ್ರತಿನಿತ್ಯ ಮಧ್ಯಾಹ್ನ12.30 ರಿಂದ 2.30 ರ ತನಕ ಅನ್ನಸಂತರ್ಪಣೆ ಇರಲಿದೆ ಎಂದು ಹೇಳಿದರು.

ಮಂಗಳೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವರ್ಚುವಲ್ ಮಾದರಿಯಲ್ಲಿ ನಡೆಸಲಾಗುತ್ತಿದ್ದು, ಸ್ಥಳೀಯ ಟಿವಿ ಚಾನೆಲ್‌ಗಳ ಮೂಲಕ ನೇರ ಪ್ರಸಾರವಾಗಲಿದೆ ಎಂದು ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು.

ದಸರಾ ಕಾರ್ಯಕ್ರಮಗಳು:
ಅ.7ರಂದು ಮಹಾನವಮಿ ಉತ್ಸವ ಆರಂಭ. ಬೆಳಗ್ಗೆ 9 ಕ್ಕೆ ಗುರುಪ್ರಾರ್ಥನೆ 11.30ಕ್ಕೆ ಕಲಶ ಪ್ರತಿಷ್ಠೆ ಹಾಗೂ 11.40ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ. 12.30 ಕ್ಕೆ ಪುಷ್ಪಾಲಂಕಾರ ಮಹಾ ಪೂಜೆ, ಸಂಜೆ 7 ಕ್ಕೆ ಭಜನೆ, ರಾತ್ರಿ 8.30 ರಿಂದ ಶ್ರೀದೇವಿ ಪುಷ್ಪಾಲಂಕಾರ ಮಹಾ ಪೂಜೆ ಮತ್ತು ಉತ್ಸವ ನಡೆಯಲಿದೆ.

ವಿಶೇಷ ಪೂಜೆಗಳು: ಅ. 8 ರಂದು ಬೆಳಗ್ಗೆ 10 ಕ್ಕೆ ದುರ್ಗಾ ಹೋಮ, ಅ. 9 ರಂದು ಆರ್ಯ ದುರ್ಗಾ ಹೋಮ, ಅ. 10 ರಂದು ಭಗವತೀ ದುರ್ಗಾ ಹೋಮ, ಅ. 11 ರಂದು ಕುಮಾರಿ ದುರ್ಗಾ ಹೋಮ, ಅ.12 ರಂದು ಮಹಿಷ ಮರ್ದಿನಿ ದುರ್ಗಾ ಹೋಮ, ಅ. 13ರಂದು ಚಂಡಿಕಾ ಹೋಮ, ಅ. 14 ರಂದು ಸರಸ್ವತಿ ದುರ್ಗಾ ಹೋಮ, 11.30ಕ್ಕೆ ಶತ ಸೀಯಾಳಾಭಿಷೇಕ ನಡೆಯಲಿದೆ.

ಅ. 15 ರಂದು ವಾಗೀಶ್ವರಿ ದುರ್ಗಾ ಹೋಮ, 12.30 ಕ್ಕೆ ಶಿವ ಪೂಜೆ, 7 ರಿಂದ ಶ್ರೀದೇವಿ ಪುಷ್ಪಾಲಂಕಾರ, ಮಹಾ ಪೂಜೆ, ಉತ್ಸವ, ರಾತ್ರಿ 8 ಕ್ಕೆ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ಬಳಿಕ ಶಾರದಾ ವಿಸರ್ಜನೆ, ಅವಭೃತ ಸ್ನಾನ. ಅ. 16 ರಂದು ರಾತ್ರಿ 7 ಕ್ಕೆ ಭಜನೆ, 7.30 ರಿಂದ ಗುರು ಪೂಜೆ ನಡೆಯಲಿದೆ.

ದೇವರ ದರ್ಶನಕ್ಕೆ ನಿಬಂಧನೆಗಳು: ಕ್ಷೇತ್ರಕ್ಕೆ ಆಗಮಿಸುವ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯ. ಮಾಸ್ಕ್ ಇಲ್ಲದವರಿಗೆ ಪ್ರವೇಶ ನಿಷೇಧಿಸಲಾಗುತ್ತದೆ. ದೇವಸ್ಥಾನದ ಪ್ರಾಂಗಣ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನಿಂಗ್‌ಗೆ ಒಳ ಪಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳ ಬೇಕು. ದೇಗುಲದ ವಠಾರ ಮತ್ತು ಒಳಗೆ, ದರ್ಬಾರು ಮಂಟಪದಲ್ಲಿ ಮೊಬೈಲ್ ಬಳಕೆ, ಫೋಟೊ, ಸೆಲ್ಫಿ ನಿಷೇಧಿಸಲಾಗಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಂಗಳೂರು ದಸರಾ ಮಹೋತ್ಸವ ಸಂದರ್ಭ ರಾಜಬೀದಿ ಅಲಂಕಾರದ ಸಂಪೂರ್ಣ ಜವಾಬ್ದಾರಿಯನ್ನು ಮಂಗಳೂರು ಮಹಾನಗರಪಾಲಿಕೆ ವಹಿಸಿಕೊಂಡಿರುವುದು ನಿಜಕ್ಕೂ ದಸರಾ ಉತ್ಸವಕ್ಕೆ ಮತ್ತೊಂದು ಹಿರಿಮೆಯಾಗಿದೆ. ಇದಕ್ಕೆ ಕಾರಣಕರ್ತರಾದ ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಕಮಿಷನರ್ ಅಕ್ಷಯ್ ಶ್ರೀಧರ್ ಮತ್ತು ಜಿಲ್ಲೆಯ ಎಲ್ಲ ಶಾಸಕರು, ಎಲ್ಲ ಮನಪಾ ಕಾರ್ಪೊರೇಟರ್‌ಗಳಿಗೆ ಕೃತಜ್ಞತೆಗಳು ಎಂದು ಅಭಿವೃದ್ಧಿ ಸಮಿತಿಯ ಸದಸ್ಯ ಹರಿಕೃಷ್ಣ ಬಂಟ್ವಾಳ್ ತಿಳಿಸಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »