TOP STORIES:

ನಿಡ್ಡೋಡಿ: ಕಾಲನ ಹೊಡೆತಕ್ಕೆ ಸಿಕ್ಕ ಮೈಂದಡಿ ದೈವಸ್ಥಾನ ಮತ್ತು ಗರಡಿ


ಮಂಗಳೂರು: ತುಳುನಾಡು ಎಂದಕ್ಷಣ ಕಣ್ಣಿಗೆ ಕಾಣುವುದು ದೈವಾರಾಧನೆ. ತುಳುವರ ರಕ್ತದಲ್ಲಿ ದೈವಾರಾಧನೆ ಬೆರೆತು ಹೋಗಿದೆ. ಏನೇ ಕಷ್ಟ ಬಂದರು ಮೊರೆ ಹೋಗುವುದು ದೈವಗಳ ಕಾಲ ಬುಡಕ್ಕೆ. ನಂಬಿದವರನ್ನು ಯಾವತ್ತು ಕೈಬಿಟ್ಟವರಲ್ಲ ಈ ಅತಿಮಾನುಷ ಶಕ್ತಿಗಳಾದ ದೈವಗಳು. ಅದೆಷ್ಟೋ ಕಾಲದ ಹೊಡೆತಕ್ಕೆ ಮಣ್ಣಿನಡಿಗೆ ಸೇರಿದ ದೈವಸ್ಥಾನಗಳು ಕೂಡ ಕಾಲ ಬಂದಾಗ ತಮ್ಮ ಇರುವಿಕೆಯನ್ನು ತೋರಿಸಿ ತಮಗೆ ಬೇಕಾದ ಸ್ಥಾನಮಾನಗಳನ್ನು ಕಟ್ಟಿಸಿಕೊಂಡು ನಂಬಿದವರಿಗೆ ಇಂಬುಕೊಟ್ಟವರು.

ಇಂತಹ ದೈವಾರಾಧನೆಯಲ್ಲಿ ಗರಡಿಗಳು ಕೂಡ ಕಾಯ ಬಿಟ್ಟು ಮಾಯ ಸೇರಿದ ಅವಳಿ ಕಾರಣೀಕ ಪುರುಷರ ಆರಾಧನ ಕೇಂದ್ರ. ಪ್ರಸ್ಥುತ 250 ಮಿಕ್ಕಿ ಗರಡಿಗಳು ಇದ್ದರು ಕೂಡ ಕೆಲವು ಗರಡಿಗಳು ಮಣ್ಣಿನ ಅಡಿಯಲ್ಲಿ ಜೀರ್ಣಾವಸ್ಥೆಯಲ್ಲಿ ಇದೆ. ಹೆಸರಿಗೆ ಮಾತ್ರ ಲೆಕ್ಕದಲ್ಲಿ ಇದೆ. ಅಂತಹುದೇ ಗರಡಿಗಳಲ್ಲಿ ಮೈಂದಡಿ ಗರಡಿಯು ಒಂದು. ಶ್ರೀ ಕ್ಷೇತ್ರ ಕಟೀಲಿಗೆ ಹೋಗುವ ದಾರಿಯಲ್ಲಿ ಸಿಗುವ ನಿಡ್ಡೋಡಿ ಎಂಬ ಗ್ರಾಮದಲ್ಲಿ ಮೈಂದಡಿ ಎನ್ನುವ ಪುಟ್ಟ ಊರು. ಹಸಿರು ಕಾಂತಿಯಿಂದ ಈ ಹಳ್ಳಿ ಕಂಗೊಳಿಸುತ್ತಾ ಇದ್ದು ಎಲ್ಲರು ನೆಮ್ಮದಿಯಿಂದ ಒಟ್ಟಾಗಿ ಜೀವಿಸುತ್ತಿರುವ ಊರು. ಕಾಲದ ಹೊಡೆತಕ್ಕೆ ಸಿಕ್ಕಿ ಈ ಹಿಂದೆ ವಿಜೃಂಭಣೆಯಿಂದ ನಡೆಯುತ್ತಿದ್ದ ಗರಡಿ ಜಾತ್ರೆ ಕಾಲಗರ್ಭದಲ್ಲಿ ಹುದುಗಿ ಹೋಗಿದೆ. 66 ಗರಡಿ 33 ತಾವುಗಳೆಂಬ ನಾಣ್ಣುಡಿಯಂತೆ ಈ ಗರಡಿಯು ಕೂಡ 66 ಗರಡಿಯಲ್ಲಿ ಸೇರಿರಬಹುದೆಂಬ ನಂಬಿಕೆಯಿದೆ. ಇಲ್ಲಿ ಅಳಿದು ಉಳಿದಿರುವ ಶಕ್ತಿ ಕಲ್ಲು, ದಂಬೆ ಕಲ್ಲು, ಆಯದ ಕಲ್ಲು, ತೀರ್ಥ ಬಾವಿ ಇವೆಲ್ಲ ಇದಕ್ಕೆ ಸಾಕ್ಷಿಯೆಂಬಂತೆ ಇದೆ. ಸುಮಾರು 150 ವರ್ಪಗಳ ಹಿಂದೆ ಬಹು ಸಡಗರದಿಂದ ನಡೆಯುತ್ತಿದ್ದ ನೇಮೋತ್ಸವವು ಯಾಕಾಗಿ ನಿಂತಿದೆ ಎನ್ನುವ ಮಾಹಿತಿ ಯಾರಿಗೂ ಇಲ್ಲ. ನೋಡಿದ ಕೇಳಿದ ಜನರು ಇರಲು ಸಾಧ್ಯವಿಲ್ಲ. ಆದರೆ 5 ಕಡೆಗಳಿಂದ ದೈವಗಳು ಮತ್ತು ಬೈದೇರುಗಳ ಭಂಡಾರ ಬಂದು ನೇಮೋತ್ಸವ ಆಗುತ್ತಿದ್ದ ಬಗ್ಗೆ ಅಲ್ಪ ಸ್ವಲ್ಪ ಮಾಹಿತಿಯಿದೆ. ಭಾವದ ಮನೆಯಿಂದ ಕೊಡಮಂದಾಯ ದೈವದ ಭಂಡಾರ, ಪಾತ್ರಬೈಲು ಮನೆಯಿಂದ ಸರಳ ಜುಮಾದಿ ಭಂಡಾರ, ಮಚ್ಚಾರು ಮನೆಯಿಂದ ಬೈದೇರುಗಳ ಭಂಡಾರ, ನಂದೊಟ್ಟು ಮನೆಯಿಂದ ಕಾಂತೇರ್ ಜುಮಾದಿ ಭಂಡಾರ ಮತ್ತು ಇನ್ನೊಂದು ಕಡೆಯಿಂದ ಜಾರಂದಾಯನ ಭಂಡಾರ ಮೈಂದಡಿ ಎನ್ನುವ ಸ್ಥಳದಲ್ಲಿ ಇರುವ ದೈವಸ್ಥಾನಕ್ಕೆ ಮತ್ತು ಗರಡಿಗೆ ಒಟ್ಟಾಗಿ ಬಂದು ಧ್ವಜಾರೋಹಣ ಆಗಿ ನೇಮೋತ್ಸವ ಆಗುತ್ತಿತ್ತಂತೆ. ಇಡೀ ಊರಿಗೆ ಇದು ಜಾತ್ರೆ. ಗ್ರಾಮಸ್ಥರು ಎಲ್ಲರು ಒಟ್ಟಾಗಿ ದೈವಗಳ ಮತ್ತು ಬೈದೇರುಗಳ ಭಂಡಾರ ಮನೆಯವರ ಮುಂದಾಳತ್ವದಲ್ಲಿ ನಡೆಸುತ್ತಿದ್ದರಂತೆ. ಆದರೆ ಯಾವುದೋ ಒಂದು ವಿಷ ಗಳಿಗೆಯಲ್ಲಿ ಎಲ್ಲವು ನಿಂತು ಹೋಗಿ ಮೈಂದಡಿಯಲ್ಲಿರುವ ದೈವಸ್ಥಾನ ಮತ್ತು ಗರಡಿ ಧರಶಾಹಿಯಾಗಿದೆ. ಈ ಬಗ್ಗೆ ಊರಿನ ಸಂಬಂಧಪಟ್ಟವರಿಂದ ಆಶಾದಾಯಕ ಬೆಳವಣಿಗೆಗಳು ನಡೆಯುತ್ತಿದ್ದು ಅತೀ ಬೇಗನೆ ಆಗಬಹುದೆಂಬ ನಂಬಿಕೆಯಿದೆ. ಒಂದಂತು ಸತ್ಯ ಯಾವ ಕಾಲಕ್ಕೆ ಯಾವುದು ಆಗಬೇಕೆನ್ನುವುದು ದೈವ ನಿರ್ಣಯ. ದೈವಗಳ ಮತ್ತು ಬೈದೇರುಗಳ ನಿರ್ಣಯ ಯಾವ ರೀತಿ ಇದೆಯೆಂಬುದು ಯಾರಿಗೂ ತಿಳಿದಿಲ್ಲ. ಆದರೆ ಆಗುತ್ತೆ ಎನ್ನುವುದು ಸಾರ್ವಕಾಲಿಕ ಸತ್ಯ. ಗ್ರಾಮಸ್ಥರೆಲ್ಲ ಈ ಬಗ್ಗೆ ಉತ್ಸುಕತೆಯಿಂದ ಕಾಯುತ್ತಿದ್ದು ಎಲ್ಲರು ಒಂದು ಕಡೆ ಸೇರಿ ಈ ಬಗ್ಗೆ ಚರ್ಚಿಸಲು ಮಾತ್ರ ಬಾಕಿಯಿರುತ್ತದೆ. ಇಲ್ಲಿನ‌ ಪಳೆಯುಳಿಕೆಗಳಾದ ದೈವಗಳ ದೈವಸ್ಥಾನ, ಬೈದೇರುಗಳ ಗರಡಿ, ದಂಬೆಕಲ್ಲು, ಶಕ್ತಿಕಲ್ಲು, ಆಯದ ಕಲ್ಲು, ತೀರ್ಥ ಬಾವಿ ಹೊರಗಿನಿಂದ ಅಲ್ಪಸ್ವಲ್ಪ ಕಾಣುತ್ತಿದ್ದು ಚಿತ್ರಣವನ್ನು ನೋಡುವಾಗ ಮೈ ರೋಮಾಂಚಣಗೊಳ್ಳುತ್ತದೆ. ಇಂದಿಗೂ ಅಲ್ಲಿರುವ ಶಕ್ತಿಗಳು ಭಕ್ತರ ಬರುವಿಕೆಗೆ ಕಾದಿದೆಯೋ ಎನ್ನುವಂತೆ ಭಾಸವಾಗುತ್ತಿದೆ.

Credits: ನಮ್ಮ ಬಿಲ್ಲವೆರ್


Related Posts

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »