TOP STORIES:

ಬಿರುವೆರ್‌ ಕುಡ್ಲ ಸಂಘಟನೆ ವಿರುದ್ಧದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ


ಉಡುಪಿ: ನಾಳೆಯೊಳಗಾಗಿ ಸಂಘಟನೆ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್‌ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ.

ಬಿರುವೆರ್ ಕುಡ್ಲ ಉಡುಪಿ ಘಟಕದಿಂದ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಬಿರುವೆರ್‌ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್‌ ಪಂಪ್‌ವೆಲ್‌ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿ ನೋವುಂಟು ಮಾಡಿದ್ದಾರೆ. ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆ ಕೇಳದೇ ಇದ್ದಲ್ಲಿ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಕೌಟುಂಬಿಕ ಸಂಬಂಧಗಳ ಆಧಾರದಲ್ಲಿ ಮೆಚ್ಚಿಸಲು ಏಕಾಏಕಿ ಬಿರುವೆರ್‌ ಕುಡ್ಲದ ಮೇಲೆ ಆರೋಪ ಮಾಡುವುದು ಸಲ್ಲದು. ಗುರ್ಜಿ ದೀಪೋತ್ಸವ ಮಾಡುವ ಜವಾಬ್ದಾರಿಯನ್ನು ಹೊತ್ತ ಸಮಿತಿಯ ಪವಿತ್ರ ಜಾಗದಲ್ಲಿ ಕುಡಿದು ಕುಪ್ಪಳಿಸಿ ದಾರಿಯಲ್ಲಿ ಹೋಗುವವರಿಗೆ ಗುರಾಯಿಸಿ ನೋಡುವ, ತಮಾಷೆ ಮಾಡುವ ಮೂಲಕ ಪ್ರಚೋದನೆ ನೀಡಿ ಹೊರಗಿನಿಂದ ಬಂದ ಜನ ಪಾರ್ಟಿಯ ಹೆಸರಿನಲ್ಲಿ ಗಲಾಟೆಗೆ ಕಾರಣರಾಗುತ್ತಿದ್ದಾರೆ. ಶರಣ್ ಪಂಪ್‌‌ವೆಲ್ ಅವರು ಮೊದಲು ಇದನ್ನು ತಡೆಯುವ ಕೆಲಸವನ್ನು ಮಾಡಬೇಕಿದೆ. ಬಳ್ಳಾಲ್‌ ಬಾಗ್‌ನಲ್ಲಿ ಬಂದು ಯಾರು ಗಲಾಟೆ ಮಾಡುತ್ತಿದ್ದಾರೆ ಎನ್ನುವುದನ್ನು ಶರಣ್‌ ಪಂಪ್‌ವೆ‌ಲ್‌‌ ಅವರು ಮೊದಲು ತಿಳಿದುಕೊಳ್ಳಬೇಕು ಎಂದು ಬಿರುವೆರ್ ಕುಡ್ಲ ಸಂಘಟನೆ ಹೇಳಿದೆ

ಪೊಲೀಸ್‌ ಇಲಾಖೆ ಕೂಡಾ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ತನಿಖೆ ಮಾಡುತ್ತಿದ್ದು, ಎಲ್ಲಿಯೂ ಬಿರುವೆರ್‌ ಕುಡ್ಲದ ಹೆಸರು ಪ್ರಸ್ತಾಪಿಸಿಲ್ಲ. ಒಂದೆರಡು ವ್ಯಕ್ತಿಗಳು ಬಂದು ನಮ್ಮ ಸಂಘಟನೆಯ ಮೇಲೆ ವಿನಾಕಾರಣ ಆರೋಪ ಮಾಡಿದರೆ ಜನತೆ ನಂಬುವುದಿಲ್ಲ. ಬಿರುವೆರ್‌‌ ಕುಡ್ಲದ ವತಿಯಿಂದ ಸಮಾಜ ಸೇವೆ ಮುಂದುವರಿಯಲಿದೆ. ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದಲ್ಲಿ ಬಿರುವೆರ್‌ ಕುಡ್ಲ ಸಂಘಟನೆಯ ಪಾತ್ರವಿಲ್ಲ. ಹಲ್ಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ. ಹಾಗಾಗಿ ಶರಣ್‌ ಪಂಪ್‌‌ವೆಲ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು‌ ಸಂಘಟನೆ ಒತ್ತಾಯಿಸಿದೆ.

ಬಿರುವೆರ್‌ ಕುಡ್ಲ ಉಡುಪಿ ಘಟಕದ ಸಂಘಟನೆಯ ಉಡುಪಿ ಘಟಕ ಅಧ್ಯಕ್ಷ ಕಿಶೋರ್ ಪೂಜಾರಿ, ಉಪಾಧ್ಯಕ್ಷರಾದ ದಿನೇಶ್ ಅಮಿನ್, ಖಜಾಂಚಿ ರಾಜೇಶ್ ಕೊಪ್ಪ, ಕಾರ್ಯದರ್ಶಿ ಯೋಗಿಶ್ ಅಮಿನ್, ಮಾಧ್ಯಮ ಸಲಹೆಗಾರ ತೇಜಸ್ ಬಂಗೇರಾ ಉಪಸ್ಥಿತರಿದ್ದರು.


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »