TOP STORIES:

ಬಿರುವೆರ್ ಕುಡ್ಲ(ರಿ.) ಬಜಪೆ ಘಟಕ ಸ್ಪಂದನ ತಂಡದ 66ನೇ ಸೇವಾ ಯೋಜನೆ.


ದಿನಾಂಕ 14.12.2021 ನೇ ಮಂಗಳವಾರ ನಮ್ಮ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಯೋಜನೆ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗೆ ಸಹಾಯಧನ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರು ಪೈಟಿಂಗ್ ಕೆಲಸ ಮಾಡುತ್ತಿರುವಾಗ ಮೇಲಿನಿಂದ ಕೆಳಗೆ ಬಿದ್ದು ತನ್ನ ಬೆನ್ನುಮೂಳೆಮುರಿತಕ್ಕೊಳಪಟ್ಟು ನಾಲ್ಕು ವರ್ಷದಿಂದ ವೀಲ್ ಚೇರ್ ನಲ್ಲಿ ಓಡಾಡುವ ಸ್ಥಿತಿಯಲ್ಲಿ ಇದ್ದಾರೆ. ಎಷ್ಟೇ ಪ್ರಯತ್ನ ಪಟ್ಟರು ಬೆನ್ನುಮೂಳೆಸರಿಪಡಿಸಲು ಸಾಧ್ಯವಾಗಲಿಲ್ಲ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲವಿದ್ದರು ಇವರ ಕುಟುಂಬದ ಆರ್ಥಿಕಪರಿಸ್ಥಿತಿ ತುಂಬಾ ಹದಗೆಟ್ಟಿರುವುದರಿಂದ ಇವರ ಜೀವನ ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮಲಗಲು ನೀರಿನ ಹಾಸಿಗೆ ಹಾಗೂವೈದ್ಯಕೀಯ ನೆರವು ಇವರಿಗೆ ಅತ್ಯವಶ್ಯಕವಾಗಿ ಬೇಕಾಗಿರುವುದರಿಂದ ದಿನೇಶ್ ರವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆಮನವಿಯನ್ನು ಮಾಡಿರುತ್ತಾರೆ. ಮನವಿಯನ್ನು ತಕ್ಷಣವೇ ಪರಿಗಣಿಸಿದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದಸದಸ್ಯರು ಇವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗಾಗಿ ಸಹಾಯಧನವನ್ನು ನೀಡಲಾಯಿತು.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾಧ್ಯಕ್ಷರಾದ ಶ್ರೀ ಶರತ್ ಪೂಜಾರಿ ಬಜಪೆ, ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ, ಉಪಾಧ್ಯಕ್ಷರುಗಾಳದ  ಶ್ರೀ ಚಂದ್ರಶೇಖರ್ ಎಂ ಅಮೀನ್, ಚಂದ್ರಪೂಜಾರಿ ಪೆರಾರ, ದಿನೇಶ್ ಬಂಗೇರ, ಸಂಘಟನಾ ಕಾರ್ಯದರ್ಶಿಯಾದ ಶ್ರೀ ಚೇತನ್ ಬಂಗೇರ, ಪೆರ್ಮುದೆ ಸಂಚಾಲಕರಾದ ಕೀರ್ತನ್ ಅಮೀನ್, ಬ್ರಿಜೇಶ್ ಬಜಪೆ, ದೇವಿಪ್ರಸಾದ್ ಬಜಪೆ, ಕಿರಣ್ ಪೂಜಾರಿ ಎಕ್ಕಾರು, ಪ್ರಖ್ಯಾತ್ ಕೆಂಜಾರು ಕಾನ, ಸಂದೇಶ್ ಶೆಟ್ಟಿ ಜೋಕಟ್ಟೆ ಉಪಸ್ಥಿತರಿದ್ದರು.

ವಂದನೆಗಳೊಂದಿಗೆ

ಬ್ರಹ್ಮಶ್ರೀ ನಾರಾಯಣ ಗುರುವೇ ನಮಃ.

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು.

ಬಿರುವೆರ್ ಕುಡ್ಲ ಬಜಪೆ ಘಟಕ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »