ಹಣ್ಣುಗಳ ಸೇವನೆಯಿಂದ ಆರೋಗ್ಯಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಪೋಷಕಾಂಶಗಲ್ಲಿ ಸಮೃದ್ಧವಾಗಿರುವ ಹಣ್ಣುಗಳು ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅವಶ್ಯಕವಾಗಿವೆ. ಕೆಲವು ಹಣ್ಣುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಲಭ್ಯವಾಗುತ್ತವೆ.
ಅಂತಹ ಹಣ್ಣುಗಳಲ್ಲಿ ಪಪ್ಪಾಯಿ ಕೂಡ ಒಂದಾಗಿದ್ದು, ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಸಾಕಷ್ಟು ಲಾಭಗಳಿಗೆ ಎಂದು ತಜ್ಞರು ಹೇಳುತ್ತಾರೆ.
ಯುನೈಟೆಡ್ ಸ್ಟೇಟ್ಸ್ ಡಿಪಾರ್ಟ್ಮೆಂಟ್ ಆಫ್ ಅಗ್ರಿಕಲ್ಚರ್ (ಯುಎಸ್ಡಿಎ) ಪ್ರಕಾರ, ಪಪ್ಪಾಯಿಗಳಲ್ಲಿ ವಿಟಮಿನ್ ಎ, ಸಿ ಮತ್ತು ಕೆ ಗಳು ಸಮೃದ್ಧವಾಗಿದ್ದು, ಇದು ದೇಹದಿಂದ ವಿಷವನ್ನು ತೆಗೆದುಹಾಕುವ ಮೂಲಕ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸಿ, ಇದು ರೋಗಗಳು ಮತ್ತು ಸೋಂಕುಗಳನ್ನು ದೂರವಿರಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ಆಗುವ ಇತರ ಆರೋಗ್ಯ ಲಾಭಗಳು ಯಾವುವು ಎಂಬುದನ್ನು ನೋಡೋಣ.
ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವುದು:
ಜೀರ್ಣಕ್ರಿಯೆಯು ದುರ್ಬಲವಾಗಿರುವ ಜನರು ಪ್ರತಿದಿನ ಪಪ್ಪಾಯಿಯನ್ನು ತಿನ್ನುವುದು ಅತ್ಯಗತ್ಯ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಮತ್ತು ಆಹಾರವನ್ನು ವೇಗವಾಗಿ ಚಯಾಪಚಯಗೊಳಿಸಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿ ಪಪೈನ್ ಎಂಬ ಕಿಣ್ವವಿದ್ದು, ಇದು ಆಹಾರವನ್ನು ವೇಗವಾಗಿ ಒಡೆಯಲು ಸಹಾಯ ಮಾಡುತ್ತದೆ. ಇದಲ್ಲದೆ, ಮಲಬದ್ಧತೆಯ ಅಪಾಯವನ್ನು ತಡೆಯುವ ಹಣ್ಣುಗಳಲ್ಲಿ ಪಪ್ಪಾಯಿ ಕೂಡ ಒಂದು, ಏಕೆಂದರೆ ಇದರಲ್ಲಿ ಹೆಚ್ಚಿನ ನೀರಿನ ಅಂಶವಿದೆ.
ಮಧುಮೇಹಿಗಳಿಗೆ ಒಳ್ಳೆಯದು:
ಡಯಾಬಿಟಿಸ್ ಅಥವಾ ಮಧುಮೇಹ ಹೊಂದಿರುವ ರೋಗಿಗಳು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಕಪ್ ಪಪ್ಪಾಯಿಯನ್ನು ತಿನ್ನಬೇಕು. ಇದು ನೈಸರ್ಗಿಕ ಸಕ್ಕರೆಯನ್ನು ಹೊಂದಿದ್ದು, ಜೊತೆಗೆ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ, ಇದು ಸಕ್ಕರೆ ಕಾಯಿಲೆ ಇರುವವರಿಗೆ ಉತ್ತಮ ಆಯ್ಕೆಯಾಗಿದೆ. ಇದು ದೇಹದ ಮೇಲೆ ಹೈಪೊಗ್ಲಿಸಿಮಿಕ್ ಪರಿಣಾಮವನ್ನು ಬೀರಿ, ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ.
ಹೃದಯವನ್ನು ಆರೋಗ್ಯಕರವಾಗಿರಿಸುವುದು:
ಪಪ್ಪಾಯಿಯಲ್ಲಿ ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಗಳು ಹೇರಳವಾಗಿದ್ದು ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಿಡುತ್ತವೆ. ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು, ವೈದ್ಯರು ಪೊಟ್ಯಾಸಿಯಮ್‌ನ ಹೆಚ್ಚಿನ ಸೇವನೆಯನ್ನು ಶಿಫಾರಸು ಮಾಡುತ್ತಾರೆ. ವಿಟಮಿನ್ ಬಿ, ಸಿ, ಇ, ಬೀಟಾ-ಕ್ಯಾರೋಟಿನ್ ಮತ್ತು ಲೈಕೋಪೀನ್ ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಪಪ್ಪಾಯಿ ಅಪಧಮನಿಗಳಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೊರಹಾಕುತ್ತದೆ.
ವಯಸ್ಸಾಗುವಿಕೆ ಲಕ್ಷಣ ಕಡಿಮೆ ಮಾಡುವುದು:
ಪಪ್ಪಾಯಿಯು ಆಲ್ಫಾ-ಹೈಡ್ರಾಕ್ಸಿ ಆಮ್ಲಗಳಲ್ಲಿ ಸಮೃದ್ಧವಾಗಿದೆ. ಇದು ಚರ್ಮವನ್ನು ಹೊಳೆಯುವ, ಕೊಬ್ಬಿದ ಮತ್ತು ತಾಜಾವಾಗಿಡುವ ಅಂಶವಾಗಿದೆ. ತ್ವಚೆಯ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸಲು ಪಪ್ಪಾಯಿಯನ್ನು ಸೇವಿಸಿ, ಏಕೆಂದರೆ ಇದು ಕಡಿಮೆ ಸೋಡಿಯಂ ಹೊಂದಿರುವುದರಿಂದ, ಚರ್ಮವನ್ನು ಹೈಡ್ರೇಟ್ ಮಾಡುತ್ತದೆ.
ಕೊಲೆಸ್ಟ್ರಾಲ್ ಸುಧಾರಿಸಬಹುದು:
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಬಹುದು. ಬೇಯಿಸಿದ ಓಟ್ ಮೀಲ್‌ಗೆ ಕತ್ತರಿಸಿದ ಪಪ್ಪಾಯಿಯನ್ನು ಸೇರಿಸಿ, ಸೇವಿಸುವುದರಿಂದ ಗರಿಷ್ಠ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು, ಏಕೆಂದರೆ ಎರಡೂ ಆಹಾರಗಳು ಫೈಬರ್ ಸಮೃದ್ಧವಾಗಿದ್ದು, ಇದು ದೇಹದಿಂದ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್‌ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವುದು:
ಸ್ವತಂತ್ರ ರಾಡಿಕಲ್ಗಳು ಮತ್ತು ಆಕ್ಸಿಡೇಟಿವ್ ಒತ್ತಡವು ವಿವಿಧ ರೀತಿಯ ಕ್ಯಾನ್ಸರ್‌ಗೆ ಮುಖ್ಯ ಕಾರಣಗಳಾಗಿವೆ. ಉತ್ಕರ್ಷಣ ನಿರೋಧಕ-ಸಮೃದ್ಧವಾಗಿರುವ ಪಪ್ಪಾಯಿಯು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಲು ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಲೈಕೋಪೀನ್ ಎಂಬುದು ಹಣ್ಣುಗಳು ಮತ್ತು ತರಕಾರಿಗಳಲ್ಲಿ ಕಂಡುಬರುವ ಒಂದು ರೀತಿಯ ಕ್ಯಾರೊಟಿನಾಯ್ಡ್ ಆಗಿದ್ದು, ಅದು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ.