TOP STORIES:

ಬ್ರಹ್ಮಾವರ: ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ-ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಅರೆಸ್ಟ್


ಬ್ರಹ್ಮಾವರ: ಇಲ್ಲಿನ ಸಾಯಿಬ್ರಕಟ್ಟೆಯ ಕಾಜ್ರಳ್ಳಿ ನಿವಾಸಿ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ಪ್ರಿಯಕರ ಚೇತನ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.ತಲೆ ಮರೆಸಿಕೊಂಡಿದ್ದ ಪ್ರಿಯಕರ ಚೇತನ್ ಶೆಟ್ಟಿಯನ್ನು ಬೆಂಗಳೂರಿನಿಂದ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ಜಾಡು ಹಿಡಿದ ಬ್ರಹ್ಮಾವರ ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದರು. ಈ ನಡುವೆ ಆರೋಪಿ ಮೈಸೂರಿನಲ್ಲಿದ್ದಾನೆ ಎನ್ನುವ ಮಾಹಿತಿ ಸಿಕ್ಕಿತ್ತು. ಈ ನಡುವೆ ಆತ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದ್ದು, ಅಲ್ಲಿಂದಲೇ ಪೊಲೀಸರು ಆತನನ್ನು ಸೆಪ್ಟಂಬರ್ 2ರ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಸೆಪ್ಟಂಬರ್ 3ರಂದು ಆತನನ್ನು ಬಹ್ಮಾವರಕ್ಕೆ ಕರೆ ತರಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ಇನ್ನು ಅನಿಶಾ ಹಾಗೂ ಚೇತನ್ ಶೆಟ್ಟಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನುವ ವಿಚಾರ ಕಾಲ್ ರೆಕಾರ್ಡ್ ಹಾಗೂ ಆಕೆ ಬರೆದಿಟ್ಟಿರುವ ಡೆತ್ ನೋಟ್ ಮೂಲಕ ಸಾಬೀತಾಗಿದೆ. ಕಳೆದ ಐದು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಇದೀಗ ಅನಿಶಾ ಮದುವೆ ಪ್ರಸ್ತಾಪ ಎತ್ತಿದಾಗ ಆರೋಪಿ ಮನೆಯವರ ವಿರೋಧವಿದೆ ಎಂದು ತಪ್ಪಿಸಿಕೊಂಡಿದ್ದ. ಇದರಿಂದಾಗಿ ತೀವ್ರವಾಗಿ ನೊಂದುಕೊಂಡಿದ್ದ ಯುವತಿ ಯುವಕನಲ್ಲಿ ಹೇಳಿಕೊಂಡೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ನಡೆದ ಬಳಿಕ ದೈಜಿವರ್ಲ್ಡ್ ವಿಸ್ತೃತ ವರದಿ ಪ್ರಕಟಿಸಿತ್ತು. ಈ ನಡುವೆ ಪಾರದರ್ಶಕ ತನಿಖೆಗೆ ಬಿಲ್ಲವ ಯುವ ವೇದಿಕೆ ಒತ್ತಾಯಿಸಿತ್ತು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »