ಮಂಗಳೂರು: ಕಳೆದ ವರ್ಷ ನವೆಂಬರ್ 19ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋ ರಿಕ್ಷಾಮತ್ತು ಬಿಜೆಪಿ ವತಿಯಿಂದ 5 ಲಕ್ಷ ರೂ. ಮೌಲ್ಯದ ಚೆಕ್ ರವಿವಾರ ಹಸ್ತಾಂತರಿಸಲಾಯಿತು.
ಈ ವೇಳೆ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕುಕ್ಕರ್ ಬಾಂಬ್ ಸ್ಫೋಟಿಸುವ ಮೂಲಕಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಹುನ್ನಾರ ಈಗಾಗಲೇ ಬಯಲಾಗಿದೆ. ಎನ್‌ಐಎ ಅಧಿಕಾರಿಗಳೇ ಇದನ್ನು ಬಹಿರಂಗಪಡಿಸಿದ್ದು, ಕೃತ್ಯದ ಕುರಿತು ಅಪಹಾಸ್ಯ ಮಾಡಿದವರು, ಸ್ಫೋಟ ಮಾಡಿದವರನ್ನು ಅಮಾಯಕರು ಎಂದು ಹೇಳಿದ್ದ ಕಾಂಗ್ರೆಸಿಗರು ಈಗಏನು ಹೇಳುತ್ತಾರೆ. ಮತಬ್ಯಾಂಕ್, ತುಷ್ಠೀಕರಣದ ರಾಜಕೀಯವನ್ನು ಬಿಜೆಪಿ ಸಹಿಸುವುದಿಲ್ಲ ಎಂದರು.
ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಅಧ್ಯಕ್ಷ ರವಿಶಂಕರ್ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸಂದೀಪ್ ಗರೋಡಿ, ಸುಧೀರ್ ಶೆಟ್ಟಿ, ಶರಣ್ ಪಂಪ್‌ವೆಲ್ ಮೊದಲಾದವರುಉಪಸ್ಥಿತರಿದ್ದರು.