ಮೇಯರ್ ಆಗಿದ್ದಾಗ ಮಸಾಜ್ ಸೆಂಟರ್, ಸ್ಕಿಲ್ ಗೇಮ್ ಗಳ ಮೇಲೆ ಸದಾ ದಾಳಿ ನಡೆಸುವ ಮೂಲಕ ಮಂಗಳೂರಿನ ಜನಮಾನಸದಲ್ಲಿ ಭದ್ರವಾಗಿ ನೆಲೆಯೂರಿದ್ದ ಕವಿತಾ ಸನಿಲ್ ಅವರು ದೀರ್ಘಕಾಲದ ಬಳಿಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಂಗಳೂರು ದಕ್ಷಿಣ ಕ್ಚೇತ್ರದಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದ ಕವಿತಾ ಸನಿಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಲುಸಜ್ಜಾಗಿದ್ದಾರೆ. ಕಾಂಗ್ರೆಸ್ ನಿಂದ ಟಿಕೆಟ್ ಸಿಗದಿದ್ದರೆ
ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.
ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದ ಪ್ರಥಮ ಮಹಿಳೆ ಎಂದು ಹೆಗ್ಗಳಿಕೆಯ ಪಾತ್ರವಾಗಿದ್ದ ಕವಿತಾ ಸನಿಲ್ ಮಂಗಳೂರು ದಕ್ಷಿಣಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಮಂಗಳೂರು ದಕ್ಷಿಣ ದಲ್ಲಿ ಸುಮಾರು 60 ಸಾವಿರ ಮತದಾರರನ್ನು ಹೊಂದಿರುವ ಬಿಲ್ಲವ ಸಮುದಾಯಕ್ಕೆಸೇರಿದವರು. ಬಿಲ್ಲವ ಸಮುದಾಯ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂಬ ಹಕ್ಕೊತ್ತಾಯಈಗಾಗಲೇ ಸಮುದಾಯದಿಂದ ವ್ಯಕ್ತವಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಕ್ರಿಶ್ಚನ್ಸಮುದಾಯಕ್ಕೆ ಸೇರಿದ ಜೆ. ಆರ್. ಲೋಬೋ ಅವರಿಗೆ ಟಿಕೆಟ್ ಅಂತಿಮಗೊಳಿಸಲಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಉಳಿದಿರುವುದು ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡೇ ಕವಿತಾ ಸನಿಲ್ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕವಿತಾ ಸನಿಲ್ ಪಕ್ಷೇತರಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಮಂಗಳೂರು ದಕ್ಷಿಣದಲ್ಲೂ ಬಂಡಾಯದ ಬಿಸಿ ಕಾಂಗ್ರೆಸ್ ಗೆ ತಟ್ಟಿದಂತಾಗುತ್ತದೆ. ಮೊದಲೇ ಕರಾವಳಿಭಾಗದಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಹಿನ್ನಡೆಯಾಗುವ ಸಾಧ್ಯತೆ ಇ