TOP STORIES:

ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ: ಅಶಕ್ತ ಕುಟುಂಬಗಳಿಗೆ ಸಹಾಯ ಧನ ವಿತರಣೆ


ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ ” ಸ್ಪಂದನ ಯೋಜನೆ” ವತಿಯಿಂದ ಅಶಕ್ತ ಮೂರು ಕುಟುಂಬಗಳಿಗೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಕಳೆದ 6 ವರ್ಷಗಳಲ್ಲಿ ಒಂದು ಕೋಟಿ ಎಪ್ಪತ್ತು ಲಕ್ಷಕ್ಕೂ ಮಿಕ್ಕಿ ಧನ ಸಹಾಯ ಅನಾರೋಗ್ಯ ಪೀಡಿತ ಕುಟುಂಬಕ್ಕೆ ಹಸ್ತಾಂತರಗೊಂಡಿದೆ.
ನಾಗುರಿ ಮಜಾಲ್ ನಿವಾಸಿ ಲೋಕೇಶ್ ಅವರಿಗೆ ಸೊಂಟದ ಮೂಳೆ ಮುರಿತ ಹಾಗೂ ಒಂದು ಕಾಲು ಕಳೆದುಕೊಂಡವರಿಗೆ 50 ಸಾವಿರ ಸಹಾಯ ಹಸ್ತ.

ಬಜಾಲ್ ನಿವಾಸಿ ಪುರಂದರ ಅವರು ಕಿಡ್ನಿ ಮೂತ್ರ ಪಿಂಡ ವೈಫಲ್ಯ ಎರಡೂ ಕಾಲು ಕಳೆದುಕೊಂಡಿರುತ್ತಾರೆ ಇವರಿಗೆ 50 ಸಾವಿರದ ಸಹಾಯ ಹಸ್ತ.

ಪಿಲಿಕುಳ ಎದುರು ಪದವು ನಿವಾಸಿ ಬದ್ರುದ್ದೀನ್ ಮೂತ್ರ ಪಿಂಡ ವೈಫಲ್ಯದಿಂದ ಬಳಲುತ್ತಿದ್ದು ಇವರಿಗೆ 50 ಸಾವಿರ ಧನ ಸಹಾಯ.

ಕಾರ್ಯಕ್ರಮಕ್ಕೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು. ಜಿಲ್ಲೆಯ ಜನತೆಗೆ ಬಿರವೆರ್ ಕುಡ್ಲ ಸಂಘಟನೆಯ ಸೇವೆ ಬಹು ದೊಡ್ಡ ಕೊಡುಗೆ. ಈ ಸಂಘಟನೆಯ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ ಈ ಸಂಘ ಕಳೆದ ಹಲವು ವರ್ಷದ ಅವಧಿಯಲ್ಲಿ ಒಂದುವರೆ ಕೋಟಿಗೂ ಅಧಿಕ ಮೊತ್ತದ ಸಹಾಯ ಅಸ್ತ ನೀಡುತ್ತಿದ್ದು ಶ್ಲಾಘನೀಯ ಕಾರ್ಯ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಈ ಸಂಘಟನೆಯಿಂದಾಗಲಿ ಎಂದವರು ಹೇಳಿದರು.

ಈ ಸಂದರ್ಭದಲ್ಲಿ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ .ವೈ ಭರತ್ ಶೆಟ್ಟಿ, ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ್, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್ ಸಾಯಿ ರಾಮ್,ಮೂಡ ಅಧ್ಯಕ್ಷ ರವಿ ಶಂಕರ್ ಮಿಜಾರ್,ರವೀಂದ್ರ ನಿಕಮ್,ಲತೀಶ್ ಬಲ್ಲಾಳ್ ಭಾಗ್,ಬಾಬಾ ಅಲಂಕಾರ್,ಸೂರಜ್ ಕಲ್ಯ,ಲಿಖಿತ್ ಕೋಟ್ಯಾನ್,ಲೋಹಿತ್ ಗಟ್ಟಿ,ರೆನಿತ್ ರಾಜ್ ಅಶೋಕ್ ನಗರ,ಮನೋಜ್ ಶೆಟ್ಟಿ,ರಾಕೇಶ್ ಸಾಲಿಯಾನ್,ಅಮಿತ್ ರಾಜ್,ರಾಮ್ ಎಕ್ಕೂರು,ವಾಝಿ ಪದವಿನಂಗಡಿ,ಅಶ್ರಫ್ ಆಲಿ ಕಾರ್ಕಳ,ದಿನಿಲ್ ಬಲ್ಲಾಳ್ ಭಾಗ್,ಸುರೇಶ್ ಬಲ್ಲಾಳ್ ಭಾಗ್,ರೋಷನ್ ಬಲ್ಲಾಳ್ ಭಾಗ್,ಕಿಶೋರ್ ಬಾಬು ಕೋಡಿಕಲ್,ಪ್ರಾಣೇಶ್ ಬಂಗೇರ,ಕಿರಣ್ ಉರ್ವ,ಯಶ್ವಿನ್ ಪೂಜಾರಿ,ರಕ್ಷಿತ್ ಮೂಲ್ಕಿ, ಮುಂತಾದ ಪ್ರಾಮುಖ ಸದಸ್ಯರು ಮತ್ತು ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

 


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »