🏆ವಿಶ್ವ ಚಾಂಪಿಯನ್ ಭಾರತ 🇮🇳🏆
ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಹಾರ್ದಿಕ ಅಭಿನಂದನೆಗಳು.
ಈ ಐತಿಹಾಸಿಕ ವಿಜಯದಲ್ಲಿ ನಮ್ಮ ತುಳುನಾಡಿನ ಹೆಮ್ಮೆಯಿದೆ! ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ
ಅವರು ಭಾರತ ತಂಡದಲ್ಲಿದ್ದರು. ಕರಾವಳಿಯ ಕೀರ್ತಿ ಪತಾಕೆಯನ್ನು ವಿಶ್ವ ಮಟ್ಟದಲ್ಲಿ ಹಾರಿಸಿದ ಧನಲಕ್ಷ್ಮಿ ಅವರಿಗೆ ವಿಶೇಷ ಅಭಿನಂದನೆಗಳು💐



